ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರರ ಮಂಗಳೂರು, ಬೆಂಗಳೂರು, ಚಿತ್ರದುರ್ಗದ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರರಾಗಿ 18 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಮಹದೇವಪ್ಪರ ಮಂಗಳೂರಿನ ಕದ್ರಿ ಕಂಬಳದಲ್ಲಿರುವ ಬಾಡಿಗೆ ಮನೆ, ಕದ್ರಿ ಮಲ್ಲಿಕಟ್ಟೆ ಯಲ್ಲಿರುವ ಕಚೇರಿಗೆ ದಾಳಿ ನಡೆಸಲಾಗಿದೆ.
ಜತೆಗೆ ಬೆಂಗಳೂರಿನ ಸಿದ್ದೇನಹಳ್ಳಿಯಲ್ಲಿರುವ ಮನೆ ಹಾಗೂ ಚಿತ್ರದುರ್ಗದಲ್ಲಿರುವ ಸಂಬಂಧಿಕರ ಮನೆಗೆ ಬೆಳ್ಳಂಬೆಳಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಎಸಿಬಿ ವಿಭಾಗದ ಡಿಎಸ್ಪಿ ಮಂಜುನಾಥ್ ಬಿ. ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಮೋಹನ್ ಕೊಟ್ಟಾರಿ, ಹಾಲಪ್ಪ, ಜಯರಾಮ್ ಗೌಡ ಎಂಬವವರು ದಾಳಿ ನಡೆಸಿದ ತಂಡದಲ್ಲಿದ್ದರು ಎಂದು ತಿಳಿದುಬಂದಿದೆ.