ಬೆಂಗಳೂರು: ಜಗತ್ತಿನಾದ್ಯಂತ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ರಾಜ್ಯ ಸರ್ಕಾರವು ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಿದೆ.
ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್ಗಳು, ರೆಸ್ಟೋರೆಂಟ್ಗಳು ಮತ್ತು ಬಾರ್ಗಳಲ್ಲಿ ಹೊಸ ವರ್ಷವನ್ನು ಆಚರಿಸಲು ಮಾಸ್ಕ್ಗಳನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ವರ್ಷದ ಆಚರಣೆಗಳು 1 ಗಂಟೆಯ ಮೊದಲು ಮುಕ್ತಾಯಗೊಳ್ಳುತ್ತವೆ. ಭಯಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.
Masks have been made mandatory inside movie theatres, schools&colleges. Masks will be mandatory to celebrate the New Year in pubs, restaurants & bars. New Year celebrations to end before 1 am. No need to panic, just have to take precautions: Karnataka Health Minister
(file pic) pic.twitter.com/cUY63BcaRG
— ANI (@ANI) December 26, 2022