ಉಡುಪಿ: ಉಡುಪಿ ಜಿಲ್ಲೆಯ ಅತ್ಯಂತ ಪ್ರಾಚೀನ ನೆಲೆಗಳಲ್ಲಿ ಒಂದಾಗಿರುವ “ಕೊಪ್ಪರಿಗೆ ಅಪ್ಪ” ಹರಕೆ ಖ್ಯಾತಿಯ ಪೆರ್ಣಂಕಿಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.
ಹಬ್ಬದ ಪ್ರಯುಕ್ತ ದೇಗುಲದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಹಾಗಣಪತಿಗೆ ವಿಶೇಷ ನೈವೇದ್ಯ, ಅಭಿಷೇಕ ಮಾಡಿದ ಬಳಿಕ ಮಹಾಮಂಗಳಾರತಿ ಬೆಳಗಿಸಲಾಯಿತು. ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.












