‘ಮಂಗಳವಾರಂ’ ಅಜಯ್​ ಭೂಪತಿ ನಿರ್ದೇಶನದ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್​

‘ಮಂಗಳವಾರಂ’ ವಿಭಿನ್ನ ಚಿತ್ರ: ಇದಕ್ಕೂ ಮುನ್ನ ನಿರ್ದೇಶಕ ಅಜಯ್​ ಭೂಪತಿ ಸಿನಿಮಾ ಬಗ್ಗೆ ಮಾತನಾಡಿದ್ದರು.ಅಜಯ್​ ಭೂಪತಿ ನಿರ್ದೇಶನದ ‘ಮಂಗಳವಾರಂ’ ಸಿನಿಮಾ ನವೆಂಬರ್ 17ರಂದು ರಿಲೀಸ್​ ಆಗಲಿದೆ. ‘ಮಂಗಳವಾರಂ’ ವಿಭಿನ್ನ ಚಿತ್ರ ಎಂದು ಬಣ್ಣಿಸಿರುವ ಅಜಯ್​, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಸಿನಿಮಾದಲ್ಲಿ ಒಟ್ಟು 30 ಪಾತ್ರಗಳಿವೆ. ‘ಆರ್​​ಎಕ್ಸ್ 100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಅಜಯ್​ ಭೂಪತಿ. ಇದೀಗ ಅವರು ‘ಮಂಗಳವಾರಂ’ ಎಂಬ ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನ ಮಾಡಿದ್ದು, ಬಹುತೇಕ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.ಪ್ರತಿ ಪಾತ್ರಗಳು ಮುಖ್ಯವಾಗಿದ್ದು ಎಂದು ತಿಳಿಸಿದ್ದರು.ಚಿತ್ರತಂಡ: ‘ಮಂಗಳವಾರಂ’ ರಸ್ಟ್ರಿಕ್ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್ ಮುಖ್ಯಭೂಮಿಕೆಯಲ್ಲಿದ್ದಾರೆ. ಇದರ ಜೊತೆಗೆ ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್: ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, ‘ಆರ್​ ಎಕ್ಸ್ 100 ಚಿತ್ರದಂತೆಯೇ ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ’ ಎಂದು ಈ ಹಿಂದೆ ಮಾಹಿತಿ ನೀಡಿದ್ದರು.

ಸಿನಿಮಾವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ.

ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ. ‘ಕಾಂತಾರ’ ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮಂಗಳವಾರಂ ಎಂಬ ಸಿನಿಮಾ ಮುಖಾಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.