ದ.ಕ. ಜಿಲ್ಲೆ: ಇಂದು 139 ಮಂದಿಯಲ್ಲಿ ಕೊರೊನಾ ಪಾಸಿಟಿವ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 139 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ.

ಹಾಗೂ ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 159 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಇಂದು 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9, ಹಾಗೂ ಬೇರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.