ಮಂಗಳೂರು: ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಮರಳು ಲಾರಿಯನ್ನು ಮಂಗಳೂರಿನ ಪಡೀಲ್ ಜಂಕ್ಷನ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ.
KA-46-3202 ಲಾರಿಯನ್ನು ಪರಿಶೀಲಿಸಿದಾಗ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ. ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.