ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆರಡು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
30 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 30 ವರ್ಷದ ಯುವಕ
ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ವ್ಯಕ್ತಿ ಹಾಗೂ 55 ವರ್ಷದ ಮಹಿಳೆಗೆ SARI ಪ್ರಕರಣದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಮಂಗಳೂರಿನ ಯೆಯ್ಯಾಡಿ ನಿವಾಸಿ ಮಹಿಳೆ ಜ್ವರದಿಂದ ಕೋವಿಡ್ ಆಸ್ಪತ್ರೆಗೆ ಬಂದಾಗ ಸೋಂಕು ಪತ್ತೆಯಾಗಿದ್ದು, ಮಹಿಳೆಗೆ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.