ಮಂಗಳೂರಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ: ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆ

ಮಂಗಳೂರು: ಮಂಗಳೂರಿನಲ್ಲಿ ಇಂದು ಮತ್ತೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಮಂಗಳೂರಿನ ಬೋಳೂರಿನ 51  ವರ್ಷದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ.
ಬೋಳೂರುನಲ್ಲಿ ಈ ಮೊದಲು ಇಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಬೋಳೂರು ಪ್ರದೇಶದಲ್ಲಿ ಮೂವರಿಗೆ ಕೊರೊನಾ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಮಂದಿಗೆ  ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.