ಮಂಗಳೂರು: ಯುವಕ ಆತ್ಮಹತ್ಯೆ

ಮಂಗಳೂರು: ನಗರದ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಕೈ ಕೊಯ್ದುಕೊಂಡು ಬಳಿಕ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕದ್ರಿ ಶಿವಭಾಗ್‌ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೆರುವಾಡ್ ನಿವಾಸಿ ರೋಶನ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕದ್ರಿ ಪಾರ್ಕ್ ಬಳಿಯ ಐಸ್‌ಕ್ರೀಂ ಅಂಗಡಿಯಲ್ಲಿ ಕೆಲಸಕ್ಕಿದ್ದ ಈತ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ. ಮಂಗಳವಾರ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬುಧವಾರ ಬೆಳಗ್ಗೆ 10 ಗಂಟೆಯಾದರೂ ಕೊಠಡಿಯಿಂದ ಯುವಕ ಹೊರಗೆ ಬಾರದ ಕಾರಣ ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ರಕ್ತದಲ್ಲಿ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದ ಈತ ಆತ್ಮಹತ್ಯೆಗೆ ಮುನ್ನ ಇದು ನನ್ನ ಕೊನೆಯ ಸ್ಟೇಟಸ್ ಅಂತ ಹಾಕಿದ್ದ ಎನ್ನಲಾಗಿದೆ.

ಈ ಹಿಂದೆಯೂ ಒಂದು ಬಾರಿ ಈತ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.