ಖಾದರ್ ಗೆ ಬೆದರಿಕೆಯೊಡ್ಡಿದವರ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿ: ಕಾಂಗ್ರೆಸ್ ಆಗ್ರಹ

ಮಂಗಳೂರು: ಸಿಎಎ ಪರ ರ್ಯಾಲಿಯಲ್ಲಿ ಭಾಗವಹಿಸಿದ ಯುವಕರು ಮಾಜಿ ಸಚಿವ ಖಾದರ್ ಅವರಿಗೆ ಜೀವ ಬೆದರಿಕೆಯೊಡ್ಡುವ ಘೋಷಣೆ ಹಾಕಿದ್ದು, ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಸುಮೋಟೋ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಮಂಗಳೂರು ಪೊಲೀಸ್ ಕಮೀಷನರ್ ಅವರು ಘೋಷಣೆ ಕೂಗಿದವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಎರಡು ವಾರದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಕಮೀಷನರ್ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
ಖಾದರ್, ಮಿಥುನ್ ರೈ, ವಿನಯಕುಮಾರ್ ಸೊರಕೆ, ರಮಾನಾಥ ರೈ ವಿರುದ್ದ ಬೆದರಿಕೆ ಹಾಕಲಾಗುತ್ತಿದೆ. ವಿರೋಧಿಗಳನ್ನು ಮುಂದಿಟ್ಟುಕೊಂಡು ಸರಕಾರದ ಕಣ್ಗಾವಲಿನಲ್ಲಿ ಇದು ನಡೆಯುತ್ತಿದೆ ಎಂದು ಆರೋಪಿಸಿದರು.