udupixpress
Home Trending ದಕ್ಷಿಣ ಕನ್ನಡ: ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್

ದಕ್ಷಿಣ ಕನ್ನಡ: ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ‌ ಸೋಮವಾರ ಡಿಸ್ಚಾರ್ಜ್  ಆಗಿದ್ದಾರೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಭಟ್ಕಳ, ಮೂರು ಮಂದಿ ಕಾಸರಗೋಡು ನಿವಾಸಿಗಳನ್ನು ಇಂದು ಬಿಡುಗಡೆ ಮಾಡಲಾಗಿದೆ.
ಅವರಿಗೆ 28 ದಿನ ಕಡ್ಡಾಯ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿದ್ದು, ಕೈಗೆ ಸೀಲ್ ಹಾಕಿ ಕಳುಹಿಸಲಾಗಿದೆ.
ಒಟ್ಟು 12 ಮಂದಿಗೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇನ್ನುಳಿದ 8 ಎಂಟು ಮಂದಿ ಕೊರೋನಾ ಸೋಂಕಿತರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
error: Content is protected !!