udupixpress
Home Trending ಕೊರೊನಾ ಲಾಕ್ ಡೌನ್ ಉಲ್ಲಂಘನೆ: 154 ವಾಹನಗಳು ಸೀಸ್

ಕೊರೊನಾ ಲಾಕ್ ಡೌನ್ ಉಲ್ಲಂಘನೆ: 154 ವಾಹನಗಳು ಸೀಸ್

ಮಂಗಳೂರು: ಮಂಗಳೂರು ನಗರ ಕಮಿಷನರ್ ವ್ಯಾಪ್ತಿಯಲ್ಲಿ ಗುರುವಾರ ಕೊರೊನ ಲಾಕ್ ಡೌನ್ ಆದೇಶ ಉಲ್ಲಂಘಿಸಿದ 154 ವಾಹನಗಳನ್ನು ಸೀಝ್ ಮಾಡಲಾಗಿದೆ ಎಂದು ಕಮಿಷನರ್ ಡಾ.ಪಿ.ಎಸ್.ಹರ್ಷ ಟ್ವೀಟ್ ಮಾಡಿದ್ದಾರೆ.
ಲಾಕ್ ಡೌನ್ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ದಿನಬಳಕೆ‌ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7 ರಿಂದ 12 ರವರೆಗೂ ಖರೀದಿಗಾಗಿ ವಾಹನಗಳಿಗೂ ಅವಕಾಶ ನೀಡಲಾಗಿತ್ತು. ಆದ್ರೆ ಮಧ್ಯಾಹ್ನ 12 ಗಂಟೆಯ ಬಳಿಕವೂ ಕೆಲವು ವಾಹನ ಸವಾರರು ರಸ್ತೆಯಲ್ಲಿ ಸಂಚಾರ ನಡೆಸಿ ಕೊರೊನ ಲಾಕ್ ಡೌನ್ ಆದೇಶ ಉಲ್ಲಂಘನೆ ಮಾಡಿದ್ದರು. ಪೊಲೀಸ್ ಆಯುಕ್ತರು ಮೊದಲೇ ಎಚ್ಚರಿಕೆ‌ ನೀಡಿದರೂ ಆದೇಶ ಧಿಕ್ಕರಿಸಿದ ರಸ್ತೆಗಿಳಿದ ವಾಹನಗಳನ್ನು ಪೊಲೀಸ್ ಕಮೀಷನರ್ ಡಾ.ಪಿ.ಎಸ್.ಹರ್ಷ ಆದೇಶದಂತೆ ವಾಹನ ಸೀಝ್ ಮಾಡಲಾಗಿದೆ.
error: Content is protected !!