ದಕ್ಷಿಣ ಕನ್ನಡದಲ್ಲಿ ಇಂದು 320 ಮಂದಿ ಕೊರೊನಾದಿಂದ ಗುಣಮುಖ: ನಾಲ್ವರು ಕೊರೊನಾಗೆ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 320 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7504 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಇಂದು 228 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10137ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 2328 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ನಾಲ್ವರು ಕೊರೊನಾಗೆ ಬಲಿ:
ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾದಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 303ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.