ಮಂಗಳೂರು: ವಿಶ್ವಕಪ್ ಕ್ರಿಕೆಟ್ ನಲ್ಲಿ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಓರ್ವನನ್ನು ಮಂಗಳೂರು ಅಪರಾಧ ಪತ್ತೆ ದಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮಂಗಳೂರು ನಿವಾಸಿ ಕೀರ್ತಿರಾಜ್ ಬಂಧಿತ ಆರೋಪಿಯಾಗಿದ್ದು, ಈತನಿಂದ 7 ಲ.ರೂ.ನಗದು, 5 ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ವಿಶ್ವಕಪ್ ಪ್ರಾರಂಭದ ಬಳಿಕ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ದಾಳಿ ನಡೆಸಿರುವ 2ನೇ ಪ್ರಕರಣ ಇದಾಗಿದೆ.
ಕಳೆದ ಐಪಿಎಲ್ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಹಲವರ ವಿರುದ್ಧ ಕ್ರಮಕೈಗೊಳ್ಳಲಾಗಿತ್ತು.
ಅಲ್ಲದೇ ಐಪಿಎಲ್ ಪ್ರಾರಂಭದ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಬೆಟ್ಟಿಂಗ್ ನಲ್ಲಿ ತೊಡಗುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಖಡಕ್ ಸೂಚನೆ ನೀಡಿದ್ದು, ಇದೀಗ ವಿಶ್ವಕಪ್ ಪ್ರಾರಂಭದ ವೇಳೆಯೂ ಅದೇರೀತಿ ಸೂಚನೆ ನೀಡಿದ್ದಾರೆ.












