ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಡಪಟ್ಟಿದೆ.
ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ‌ಮಹಿಳೆಯರು ಮತ್ತು ಓರ್ವ ‌ಪುರುಷನಿಗೆ ಸೋಂಕು ಕಂಡುಬಂದಿದೆ.
ಮೇ.1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ P-578 ವೃದ್ದನಿಂದ ಸೋಂಕು ತಗುಲಿದೆ.
ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ವೃದ್ದನಿಗೆ ಸೋಂಕು ತಗುಲಿತ್ತು.
ಆ ವೃದ್ಧ ಬಂಟ್ವಾಳ ಕಸಬಾದ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವ ವ್ಯಕ್ತಿಯಾಗಿದ್ದರು.
ವೃದ್ದನಿಗೆ ಪಾಸಿಟಿವ್ ಹಿನ್ನೆಲೆಯಲ್ಲಿ ಆ ಮನೆಯ 8 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಸದ್ಯ ಮೂವರಿಗೆ ಸೋಂಕು ಕಂಡು ಬಂದಿದೆ.
ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಸದ್ಯ ದ‌.ಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳು 31 ಆಗಿದ್ದು, ಜಿಲ್ಲೆಯಲ್ಲಿ ಕೊರೋನಾದಿಂದ 3 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 13 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.