ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಬಿರುಸಿನ ಮಳೆ

ಮಂಗಳೂರು: ವಾಯುಭಾರ ಕುಸಿತದಿಂದ ಹಾಗೂ ಕ್ಯಾರ್ ಚಂಡಮಾರುತದ‌ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ಬಿಡುವು ಪಡೆದಿದ್ದ ಮಳೆ ಶನಿವಾರ ಬೆಳಗ್ಗಿನಿಂತ ನಿರಂತರ ಸುರಿಯುತ್ತಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೊರಭಾಗವಾದ ಮೂಡಬಿದಿರೆ, ಬೆಳ್ತಂಗಡಿ, ಸುಳ್ಯ,‌ ಪುತ್ತೂರು, ಬಂಟ್ವಾಳ ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಜಿಲ್ಲೆಯಲ್ಲಿ ರೆಡ್ ಆಲರ್ಟ್ ಮುಂದುವರಿದಿದ್ದು, ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಅಂತ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ.
ಮೀನುಗಾರಿಗೂ ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ಮೀನುಗಾರು ಹಡಗುಗಳನ್ನು ದಡದಲ್ಲಿ ಲಂಗರು ಹಾಕಿದ್ದಾರೆ. ರಾತ್ರಿಯೂ ಜೋರಾಗಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ‌ಇದೆ.