ಸುಪ್ರೀಂ ತೀರ್ಪು ವಿಚಾರ: ಕೇಂದ್ರ ಸುಗ್ರಿವಾಜ್ಞೆ ಜಾರಿ ತರಲಿ: ಖಾದರ್ ಒತ್ತಾಯ

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಬೇಕು ಅಥವಾ ಮರು ಅರ್ಜಿಯನ್ನು ಸಲ್ಲಿಸಬೇಕು ಎಂದು ಮಾಜಿ ಸಚಿವ ಯು. ಟಿ. ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.
ತೀರ್ಪು ಕುರಿತು ಕೇಂದ್ರ ಸರ್ಕಾರವು ಮರು ಪರಿಶೀಲನಾ ಅರ್ಜಿ ಅಥವಾ ಸುಗ್ರಿವಾಜ್ಞೆ ಜಾರಿಗೆ ತರಬೇಕು. ಸುಪ್ರೀಂಕೋರ್ಟ್ ತೀರ್ಮಾನದ ಬಗ್ಗೆ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ಅವರ ಬದ್ಧತೆ ಏನು ಎಂದು ಪ್ರಶ್ನಿಸಿದರು.
ಪ್ರಧಾನಮಂತ್ರಿ ಆಗಿಂದಾಗ್ಗೆ ಅಂಬೇಡ್ಕರ್ ಬಗ್ಗೆ ಮಾತನಾಡುತ್ತಾರೆ. ಅವರ ಪಕ್ಷದ ಕೆಲವು ಸದಸ್ಯರು ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡುತ್ತಾರೆ. ಆದರೆ, ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದರು.
ಕೇಂದ್ರ ಸರ್ಕಾರ ಗ್ಯಾಸ್ ಬೆಲೆ ಹೆಚ್ಚಿಸಿರುವುದನ್ನು ಖಂಡಿಸುತ್ತೇನೆ.  ಗ್ಯಾಸ್ ದರ ಹೆಚ್ಚಳ ಮಧ್ಯಮವರ್ಗದ ಜನರಿಗೆ ಸಂಕಷ್ಟ ತಂದಿದೆ ಎಂದರು.