ಮಂಗಳೂರು: ಬಿಜೆಪಿಯವರು ಜೈಲುವಾಸ ಮಾಡಿ ಬಂದವರು. ಅವರಿಗೆ ಗ್ರಾಮ ವಾಸ್ತವ್ಯದ ಕಲ್ಪನೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದ್ದಾರೆ.
ಮಂಗಳವಾರ ವಿಧಾನ ಪರಿಷತ್ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ವ್ಯಂಗ್ಯವಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಐವನ್, ಕೋಟಾ ಶ್ರೀನಿವಾಸ್ ಪೂಜಾರಿ ಸ್ಥಳೀಯ ಸಂಸ್ಥೆಯಿಂದ ಚುನಾಯಿತರಾದವರು. ಆಡಳಿತದ ಅನುಭವ ಯೋಚನೆ-ಯೋಜನೆ ಇರುವವರು ಈ ರೀತಿ ಮಾತನಾಡುವುದಿಲ್ಲ. ಅಲ್ಲದೆ ಬಿಜೆಪಿಯವರು ಜೈಲುವಾಸ ಮಾಡಿದವರು. ಹೀಗಾಗಿ ಅವ್ರಿಗೆ ಗ್ರಾಮ ವಾಸ್ತವ್ಯದ ಬಗ್ಗೆ ಕಲ್ಪನೆ ಇರಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.