ಪತ್ರಕರ್ತರ ಸಂಘದ ವತಿಯಿಂದ ಪೊಲೀಸ್ ಕಮೀಷನರ್ ಭೇಟಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ ಕಮೀಷನರ್  ಡಾ.ಹರ್ಷ ಅವರನ್ನು ಭೇಟಿ ಮಾಡಿ ಪತ್ರಕರ್ತರ ಸಂಘದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಪೊಲೀಸ್ ಆಯುಕ್ತರು  ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತರ ಸಂಘದ ವತಿಯಿಂದ  ಬ್ರ್ಯಾಂಡ್ ಮಂಗಳೂರು ಯೋಜನೆ ಅಂಗವಾಗಿ ಈ ತಿಂಗಳಿನಲ್ಲಿ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗುವ ಕೋಮು ಸೌಹಾರ್ಧತೆ ಬೆಳೆಸುವ ಮತ್ತು ಮಾದಕ ದ್ರವ್ಯ ಹಾಗೂ ಸೈಬರ್ ಕ್ರೈಂ ವಿರುದ್ಧ ಜಾಗ್ರತಿ ಕಾರ್ಯಕ್ರಮಕ್ಕೆ ಹಾಗೂ ಬ್ರ್ಯಾಂಡ್ ಮಂಗಳೂರು ಅಂಗವಾಗಿ  ಅಕ್ಟೋಬರ್ 2 ರಂದು ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಪ್ರಯುಕ್ತ ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಫ್ರೆಂಡ್ ಶಿಪ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು .
ಮೀಡಿಯಾ ಸ್ಟಿಕರ್ ವಿಚಾರದ ಕುರಿತು ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ರೂಪು ರೇಷೆ ನೀಡುವ ತೀರ್ಮಾನಕ್ಕೆ  ಬರಲಾಯಿತು.
ವಾರ್ತಾ ಇಲಾಖೆಗೆ ನೂತನ ವಾಹನದ ವ್ಯವಸ್ಥೆ ಕಲ್ಪಿಸಲು ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆಯ ನಿರ್ದೇಶಕರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು .
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕೇಂದ್ರ ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಭಾಸ್ಕರ್ ರೈ ಕಟ್ಟಬೀಡು ಉಪಸ್ಥಿತರಿದ್ದರು .