ಕಡಬ: ಮದ್ಯ ಸಿಗದ ಕಾರಣ ಇಬ್ಬರು ಆತ್ಮಹತ್ಯೆ

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮದ್ಯ ಸಿಗದ ಹಿನ್ನೆಲೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿವೆ ಎಂದು ತಿಳಿದು ಬಂದಿದೆ.
ಮದ್ಯ ಸಿಗದ ಕಾರಣ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ.
ಕೋಡಿಂಬಾಳದ ತೋಮಸ್ (70)ಹಾಗೂ ಎರಡನೇ ಪ್ರಕರಣ ಕೇರಳದ ಕೊಟ್ಟಾಯಂ ಜಿಲ್ಲೆಯ ಪತ್ತನಂತಿಟ್ಟ ನಿವಾಸಿ ಟೋನಿ ಥೋಮಸ್(50) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಇಬ್ಬರು ವಿಭಿನ್ನ ಸ್ಥಳಗಳಲ್ಲಿ ನೇಣುಬಿಗಿದು ಆತ್ಮಹತ್ಯೆ ಪ್ರಕರಣಗಳಾಗಿವೆ. ಆದರೆ ಒಂದೇ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.