ಮಂಗಳೂರು: ಕೇಂದ್ರ ಸರಕಾರ ಗೋಹತ್ಯೆ ನಿಷೇಧಿಸಲಿ: ಯು.ಟಿ ಖಾದರ್

ಮಂಗಳೂರು: ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅಕ್ರಮ ಗೋ ಸಾಗಾಟದ ವಿರುದ್ಧ ಹೋರಾಟ ಅಗತ್ಯ. ಎಲ್ಲಾ ಧರ್ಮೀಯರು ಅಕ್ರಮ ಗೋಸಾಗಾಟವನ್ನು ವಿರೋಧಿಸುತ್ತಾರೆ. ಹೀಗಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸಲಿ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಡೆಂಘಿ ಪ್ರಕರಣ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ:
ಮಂಗಳೂರಲ್ಲಿ ಡೆಂಘಿ ಜ್ವರ ಪ್ರಕರಣ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಜೊತೆಗೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಜತೆಗೆ ಮುನ್ನೆಚ್ಚರಿಕೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು‌ ತಿಳಿಸಿದರು.
ಐಎಂಎ ವಂಚಿತರಿಗೆ ನ್ಯಾಯ ಕೊಡಿಸುತ್ತೇವೆ:
ಐಎಂಎ ಹಗರಣದಲ್ಲಿ ವಂಚಿತರಾದವರಿಗೆ ನ್ಯಾಯ ಕೊಡಿಸುತ್ತೇವೆ. ಎಸ್ ಐಟಿ ಮೂಲಕ ಹಗರಣದ ತನಿಖೆ ನಡೆಸಲಾಗುತ್ತಿದೆ. ಹಗರಣದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಆರೋಪಿ ಮಾಲೀಕನ ಹೇಳಿಕೆಗಳ ಕುರಿತು ತನಿಖೆ ನಡೆಯುತ್ತಿದೆ ಎಂದರು.