ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಬೈಕ್ ಸವಾರ ಸಾವು

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಶುಕ್ರವಾರ ಸಂಭವಿಸಿದೆ.
ಸುಳ್ಯ ನಿವಾಸಿ ಶೀನಪ್ಪ ರೈ(53)  ಮೃತ ದುರ್ದೈವಿ.
ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಶೀನಪ್ಪ ರೈ ಸುಬ್ರಹ್ಮಣ್ಯದ ಕೆ.ಎಸ್. ಎಸ್.ಕಾಲೇಜಿನಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು.
ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.