ಮಂಗಳೂರು: ನಗರದ ಎಕ್ಸ್ಫರ್ಟ್ ಕಾಲೇಜು ಹಾಗೂ ಮಾಂಡೊ ಮೋಟಾರ್ಸ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಫಿಸಿಕ್ಸ್ ಲ್ಯಾಬ್ ಇನ್ಸ್ಟ್ರಕ್ಟರ್ ಹಾಗೂ ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮೇ 16 ರಂದು ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಫಿಸಿಕ್ಸ್ ಲ್ಯಾಬ್ ಇನ್ಸ್ಟ್ರಕ್ಟರ್ ಹುದ್ದೆಗೆ ಬಿಎಸ್ಸಿ (ಫಿಸಿಕ್ಸ್ ಒಂದು ವಿಷಯವಾಗಿ ಅಭ್ಯಸಿಸಿರುವ) ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.
ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ವಾಹನ ಚಾಲನಾ ಪರವಾನಿಗೆ ಹೊಂದಿರುವ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















