ಮಂಗಳೂರು: ಮಾಲ್ ನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ-ಯುವಕನ ಮೇಲೆ ಹಲ್ಲೆ

ಮಂಗಳೂರು: ನಗರದ ಮಾಲ್ ವೊಂದರಲ್ಲಿ ಬುಧವಾರ ವಿದ್ಯಾರ್ಥಿಗಳ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದೆ.
ಈ ಬಗ್ಗೆ ಯುವಕ ನೀಡಿದ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿದ್ಯಾರ್ಥಿಗಳು , ಮಂಜುನಾಥ್ ಅವರನ್ನು ಥಳಿಸುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಂಜುನಾಥ್ ಎಂಬಾಂತ ಇದು ಹಿಂದೂ ರಾಷ್ಟ್ರ ಎಂದು ಹೇಳುತ್ತಿರುವುದನ್ನು ಕಾಣಬಹುದಾಗಿದೆ. ‘ಯುವಕ ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ವಿದ್ಯಾರ್ಥಿಗಳ ಗುಂಪಿನಿಂದ ದೂರುದಾರ ಮಂಜುನಾಥ್ ನನ್ನು ಥಳಿಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಲ್‌ನಲ್ಲಿ ನಡೆದ ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಆಗಮಿಸಿ ಎಫ್‌ಐಆರ್ ದಾಖಲಿಸಲಾಗಿದೆ.