ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನ. 10ರಿಂದ ಮಂಗಳೂರಿನಿಂದ ಮಂತ್ರಾಲಯಕ್ಕೆ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಿದೆ.
ಮಂಗಳೂರಿನಿಂದ-ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ-ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಈ ಬಸ್ ಕಾರ್ಯಾಚರಣೆ ಮಾಡಲಿದೆ.
ಈ ಬಸ್ಸು ಮಂಗಳೂರು ನಿಲ್ದಾಣದಿಂದ ಸಂಜೆ 6 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.30ಕ್ಕೆ ಮಂತ್ರಾಲಯಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 6.30 ಕ್ಕೆ ಹೊರಟು ಮರುದಿನ ಬೆಳಗ್ಗೆ 9ಕ್ಕೆ ಮಂಗಳೂರು ತಲುಪಲಿದೆ.
ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 970 ರೂಪಾಯಿ ಆಗಿರುತ್ತದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.