ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಚಿವ ಕೋಟ ದಿಢೀರ್ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆ (ವೆನ್ಲಾಕ್) ಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಿಢೀರ್ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

ಸಚಿವರಿಗೆ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಹಾಗೂ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಸಾಥ್ ನೀಡಿದರು. ಆಸ್ಪತ್ರೆಯ ಒಳರೋಗಿಗಳ ವಿಭಾಗದಲ್ಲಿ ದಾಖಲಾಗಿರುವ ರೋಗಿಗಳನ್ನು ಸಂದರ್ಶಿಸಿದರು. ಬಳಿಕ ವೈದ್ಯಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಸಚಿವರು, ರೋಗಿಗಳ ಬಗ್ಗೆ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ನೀಡಿದರು.