ಮಂಗಳೂರು: ಸೋಮವಾರ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಜನ ಜಾಗೃತಿ ಸಮಾವೇಶಕ್ಕೆ ಆಹ್ವಾನಿಸಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮರೆತು ಸಾರ್ವಜನಿಕರೊಳಗೆ ಗೊಂದಲಮೂಡಿಸುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರ ಅರಿಯದೆ ಜನರ ಮನಸ್ಸಿನೊಳಗೆ ಭೇದ ಭಾವ ಮೂಡಿಸುತ್ತಿರುವ ವಿರೋಧ ಪಕ್ಷಗಳ ನಡೆ ಖಂಡನೀಯ ಎಂದರು.
ಸಾರ್ವಜನಿಕ ವಲಯಗಳಲ್ಲಿ ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರು ಜನ ಜಾಗೃತಿ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ. ಹಾಗಾಗಿ ನಗರದ ಪ್ರತಿಯೊಬ್ಬರೂ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.