ಹೃದಯ ಸಂಬಂಧಿತ ಖಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ಲಕ್ಷ ರೂ. ಚೆಕ್ ವಿತರಣೆ

ಮಂಗಳೂರು: ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿದ್ದ ವ್ಯಕ್ತಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯ 1 ಲಕ್ಷ ರೂ. ಚೆಕ್ಕನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಹಸ್ತಾಂತರಿಸಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ಬರ್ಕೆ ನಿವಾಸಿ ಉಮೇಶ್ ಎಂಬವರು ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಕುಟುಂಬಸ್ಥರು ಕೊನೆಗೆ ಸ್ಥಳೀಯ ಬಿಜೆಪಿ ಮುಖಂಡರ ಮೂಲಕ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಸಂಪರ್ಕಿಸಿ ಸಹಾಯ ಕೋರಿದ್ದರು. ತಕ್ಷಣ ಸ್ಪಂದಿಸಿದ ಶಾಸಕ ಕಾಮತ್ ಮುಖ್ಯಮಂತ್ರಿ ಕಚೇರಿಯನ್ನು ಸಂಪರ್ಕಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ಒದಗಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಉಮೇಶ್ ಅವರಿಗೆ ಅನಾರೋಗ್ಯ ಸಂಬಂಧಿತ ವಿಚಾರಗಳಿಗೆ ಬಿಡುಗಡೆಗೊಳಿಸುವ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಲಾಗಿದೆ. ಮಣ್ಣಗುಡ್ಡ ವಾರ್ಡಿನ ಬಿಜೆಪಿ ಮುಖಂಡರು ಅವರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಕುರಿತು ತಿಳಿಸಿದ್ದರು. ಆ ಬಳಿಕ ಮುಖ್ಯಮಂತ್ರಿ ಕಚೇರಿಗೆ ಪತ್ರ ಮುಖೇನ ಪರಿಹಾರ ನೀಡುವಂತೆ ಕೋರಲಾಗಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಹಾಗೂ ಮುಖ್ಯಮಂತ್ರಿ ಕಚೇರಿಗೆ ಧನ್ಯವಾದಗಳು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಆಚಾರ್ ಹಾಗೂ ಬಿಜೆಪಿ ಮುಖಂಡರಾದ ಮೋಹನ್ ಆಚಾರ್ ಉಪಸ್ಥಿತರಿದ್ದರು.