ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ; ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯಕ್ಕೆ ನಿಷೇಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?.
ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು. ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು. ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.