ಧರ್ಮಸ್ಥಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಮಾ. 7 ಮತ್ತು 8ರಂದು ಮಂಗಳೂರು ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಸುಮಾರು 3 ಸಾವಿರ ಪತ್ರಕರ್ತರು ಸೇರುವ ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮಾ. 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಲಾಯಿತು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರಿಗೆ ನೀಡಿದರು.
ಈ ಸಂದರ್ಭ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ಜಿಲ್ಲೆಯ ಪದಾಧಿಕಾರಿಗಳಾದ ಆನಂದ ಶೆಟ್ಟಿ, ಭಾಸ್ಕರ ರೈ ಕಟ್ಟ, ಜಗನ್ನಾಥ ಶೆಟ್ಟಿ ಬಾಳ, ಹಾಸನ ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರವಿ ನಾಕಲ್ಗೋಡು, ಬೆಳ್ತಂಗಡಿ ತಾ.ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳಂಜ, ಶ್ರೀನಿವಾಸ ತಂತ್ರಿ, ಆರ್. ಎನ್ ಪೂವಣಿ, ಧನಕೀರ್ತಿ ಆರಿಗ, ಸತೀಶ್ ಪೇರ್ಲೆ ಉಪಸ್ಥಿತರಿದ್ದರು.
ಇದೇ ಸಂದರ್ಭ ಡಿ ಹರ್ಷೇಂದ್ರ ಕುಮಾರ್ ಅವರಿಗೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನೂ ಭೇಟಿ ಮಾಡಿ ಸಮ್ಮೇಳಣದ ಆಮಂತ್ರಣ ಪತ್ರಿಕೆ ನೀಡಲಾಯಿತು.