ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನಗರದಲ್ಲಿ ಪಿಜಿ, ಹಾಸ್ಟೆಲ್ ಗಳು ಹಾಗೂ ಇತರ ಸರ್ವೀಸ್ ಅಪಾರ್ಟ್ ಮೆಂಟ್ಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪಿಜಿ, ಸರ್ವೀಸ್ ಅಪಾರ್ಟ್ ಮೆಂಟ್ಗಳು ಹಾಗೂ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲೀಕರು, ಪಾಲುದಾರರು, ಆಡಳಿತ ಮಂಡಳಿ ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕೆಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಆದೇಶ ಮಾಡಿದ್ದಾರೆ.