ಮಂಗಳೂರು: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು.
ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು. ಹೀಗಾಗಿ ಅದೇ ದಿನ ವೀಣಾ ಅನುಪಸ್ಥಿತಿಯಲ್ಲಿ ಶಿಲ್ಪಾಗೆ ಬೇರೆ ವೈದ್ಯರು ಸಿಜೆರಿನ್ ಮಾಡಿ ಡೆಲೆವರಿ ಮಾಡಿದ್ದಾರೆ. ಹೆಣ್ಣು ಮಗು ಆಗಿದೆ, ಆದರೇ ಗರ್ಭಕೋಶವನ್ನು ತೆಗೆಯಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಎರಡು ದಿನಗಳ ನಂತರ ಶಿಲ್ಪಾಗೆ ಜ್ವರ ಬಂದಿದೆ ಎಂದು ಚಿಕಿತ್ಸೆ ನೀಡಲಾಗಿದ್ದು, 5 ದಿನಗಳ ನಂತರ ವೈದ್ಯರು ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ಎಂದಿದ್ದಾರೆ. ಜುಲೈ 25ರಂದು ಐಸಿಯುನಲ್ಲಿ ಶಿಲ್ಪಾ ಸಾವನ್ನಪ್ಪಿದ್ದಾಗಿ ಮಾಹಿತಿ ನೀಡಿದ್ದಾರೆ.
ಈ ಸಾವಿಗೆ ವೈದ್ಯರ ನಿರ್ಲಕ್ಷ್ಯ ಹಾಗೂ ಬೇರೆ ವೈದ್ಯರಿಂದ ಡೆಲಿವರಿ ಮಾಡಿಸಿದ್ದನ್ನು ಆರೋಪಿಸಿ ಶಿಲ್ಪಾ ಪತಿ ಪ್ರದೀಪ್ ಆಚಾರ್ಯರಿಂದ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎ. ಜೆ ಆಸ್ಪತ್ರೆಯ ವೈದ್ಯರಾದ ವೀಣಾ ಭಗವಾನ್ ಹಾಗೂ ಡೀನ್ ಅಶೋಕ ಹೆಗಡೆ, ಅನಸ್ತೇಶಿಯಾ ಡಾ.ಗುರುರಾಜ್ ತಂತ್ರಿ, ಆಡಳಿತ ವರ್ಗ ಹಾಗೂ ಸಿಬ್ಬಂಧಿಗಳ ನಿರ್ಲಕ್ಷತನವೇ ಕಾರಣ ಎಂದು ದೂರು ನೀಡಿದ್ದಾರೆ.
ಸದ್ಯ 174(3)(vi) ಸಿ.ಆರ್.ಪಿ.ಸಿ ಯಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮುಂದಾಗಿದ್ದು, ಈ ವೇಳೆ ಎ.ಜೆ. ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆ ಆಡಳಿತ ಮಂಡಳಿ ಬರುವಂತೆ ಮಳೆಯೇ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಂಬ್ಯುಲೆನ್ಸ್ ತಡೆದಿದ್ದಾರೆ, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟವಾಗಿದೆ. ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೂ ಪೊಲೀಸ್ ಬಲ ಪ್ರಯೋಗಿಸಿ ಮೃತದೇಹವನ್ನು ಪೊಲೀಸರು ಸಾಗಿಸಿದ್ದಾರೆ.