ಮಂಗಳೂರು: ಯುವತಿಗೆ ಗಾಂಜಾ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ವಿಡಿಯೋ ತುಣುಕೊಂಡು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ ಎನ್ನಲಾಗಿದೆ.
ವೀಡಿಯೋ ಸಂಬಂಧಿಸಿದಂತೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಕೂಡಲೇ ತನಿಖೆಗೆ ಆದೇಶಿಸಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿಗಳು ಅತ್ಯಾಚಾರ ನಡೆಸಿದ್ದಾರೆ. ಬಳಿಕ ವಿಡೀಯೋ ವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿಪ್ರಸಾದ್ ಅವರು ತನಿಖೆಗೆ ಆದೇಶಿಸಿದ್ದಾರೆ.












