ಮಂಗಳೂರು: ಕೆಲ ದಿನಗಳ ಹಿಂದೆ ವಾಯುಬಾರ ಕುಸಿತದ ಪರಿಣಾಮವಾಗಿ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ ನೀಡಿದರು.
ಕಡಲ ತೀರದ ಕೆಲ ಮನೆಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಕಡಲ್ಕೊರೆತದಿಂದ ತೊಂದರೆಗೊಳಗಾದ ಜನರಿಗೆ ಹೆಚ್ಚಿನ ಪರಿಹಾರದ ಭರವಸೆ ನೀಡಿದರು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.