ಮಂಗಳೂರು: ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಆಮಿಷವೊಡ್ಡುವ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಓರ್ವನನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶದ ತಾಂಡ ನಿವಾಸಿ ಹೊಸದಿಲ್ಲಿಯ ಸೌತ್ವೆಸ್ಟ್ನ ಜಗದಂಬಾ ವಿಹಾರ್ ಬಳಿ ನಿವಾಸಿ ಯೂಸುಫ್ ಖಾನ್ , ಬಂಧಿತ ಆರೋಪಿ.
ಈತ ಭಾರತೀ ಇಎಂಐ ಕಟ್ಟಬೇಕು ಹೇಳಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತೇವೆ, ಮೂರು ತಿಂಗಳು ಹಣ ಕಟ್ಟಬೇಕು ಎಂದು ಹೇಳಿ 1.70 ಲಕ್ಷ ರೂ. ಪಡೆದಿದ್ದು, ಅನಂತರ ಫೋನ್ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ.
ಈ ಪ್ರಕರಣವನ್ನು ಪತ್ತೆ ಹಚ್ಚಿದ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಹೊಸದಿಲ್ಲಿಯ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈತನ ಸಹಚರರಾದ ನೌಷಾದ್ ಮತ್ತು ಪ್ರಭಾಕರ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.
ವಂಚನೆ ಮಾಡಲು ಬಳಸುತ್ತಿದ್ದ 31 ಮೊಬೈಲ್ ಫೋನ್, 2 ಲ್ಯಾಪ್ಟಾಪ್, ಸಾಲದ ಬಗ್ಗೆ ಮಾಹಿತಿ ಬರೆದಿರುವ 10 ಪುಸ್ತಕಗಳು, 70 ಸಾವಿರ ರೂ. ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಮಾತ್ರವಲ್ಲದೇ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳ ಸಾರ್ವಜನಿಕರಿಗೆ ವಂಚನೆ ನಡೆಸಿರುವುದು ತನಿಖೆ ವೇಳೆ ತಿಳಿದು ಬಂದಿದೆ.