ಮಂಗಳೂರು: ಶಕ್ತಿ ವಸತಿ ಶಾಲೆ-ಪಿಯು ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

ಮಂಗಳೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು. ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ ಗುರುವಾರ ಜರುಗಿತು.
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾೖಕ್‌, ಹಾಗೂ ಇತರ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕರಾಗಿ ಆಯ್ಕೆಗೊಂಡ ನಿವೃತ್ತ ಶಿಕ್ಷಕರಾದ ಯು. ಗೋಪಾಲಕೃಷ್ಣ ಭಟ್, ವಿಮಲಾ ಬಾಯಿ, ವೀಣಾ ಬಿ., ಪಶುಪತಿ ಶಾಸ್ತ್ರಿ, ಸೋಮಶೇಖರ ಶೆಟ್ಟಿ ಅವರನ್ನು ಗುರುತಿಸಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ವಿದ್ಯಾಕಾಮತ್ ಜಿ. ವಹಿಸಿದ್ದು, ಕಾರ್ಯಕ್ರಮದಲ್ಲಿ ಶಕ್ತಿ ಎಜುಕೇಶನ್ ಟ್ರಸ್ಟ್ ನ ಅಡಳಿತಾಧಿಕಾರಿ ಬೈಕಾಡಿ ಜರ್ನಾಧನ ಅಚಾರ್, ಶಕ್ತಿ ಎಜ್ಯುಕೇಶನ್‌ ಟ್ರಸ್ಟ್‌ನ ಪ್ರಧಾನ ಸಲಹೆಗಾರ ರಮೇಶ್ ಕೆ., ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಂ ಬಾನು, ಗೋಪಾಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಬಳಿಕ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.