ಮಂಗಳೂರು: ನಗರದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ನಡುವೆ ಶುಕ್ರವಾರದಂದು ಮಸೀದಿಗಳಲ್ಲಿ ಪ್ರಾರ್ಥನೆ ನಡೆಯುತ್ತದೆ. ಹೀಗೆ ಎಲ್ಲಾ ವಿಚಾರಗಳನ್ನು ಗಮನದಲ್ಲಿರಿಸಿಕೊಂಡು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶುಕ್ರವಾರದಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.