ಮಂಗಳೂರು: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ

ಮಂಗಳೂರು: ಜಿಲ್ಲೆಯ ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಅಲಂಕರಿಸಿದ್ದಾರೆ.

ಬ್ಯೂಟಿಷಿಯನ್ ಆಗಿರುವ ‘ಪರಿವರ್ತನ್ ಟ್ರಾನ್ಸ್ ಕ್ವೀನ್ 2018’ ಪ್ರಶಸ್ತಿಯನ್ನು ಗೆದ್ದಿರುವ ಸಂಜನಾ ಚಲವಾದಿ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಜನವರಿ 10, 11 ಮತ್ತು 12ರಂದು ನಡೆದ ಯುವ ಕಾಂಗ್ರೆಸ್‌ ನ ಆನ್ ಲೈನ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಶಿವ ಅವರು ಅಧ್ಯಕ್ಷರನ್ನಾಗಿ ಆಯ್ಕೆಯಾಗಿದ್ದಾರೆ. ಸೋಹನ್ ಮತ್ತು ದೀಕ್ಷಿತ್ ಪೂಜಾರಿ ಉಪಾಧ್ಯಕ್ಷರಾಗಿದ್ದಾರೆ. ಸಂಜನಾ ಚಲವಾಡಿ ದಕ್ಷಿಣ ಬ್ಲಾಕ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.