ಮಂಗಳೂರು: ಗಾಂಜಾ ಮಾರುತ್ತಿದ್ದ ಏಳು ಮಂದಿಯ ಬಂಧನ; 44 ಕೆ.ಜಿ. ಗಾಂಜಾ ವಶ

ಮಂಗಳೂರು: ನಗರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ತಂಡವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 44 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ನರಿಂಗಾನದ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್, ಹಫೀಝ್ ಯಾನೆ ಅಪ್ಪಿ ಯಾನೆ ಮೊಯ್ದೀನ್, ತೆಲಂಗಾಣದ ವಿಠಲ್ ಚೌವ್ಹಾಣ್ ಮತ್ತು ಬೀದರ್ ನ ಸಂಜೀವ್ ಕುಮಾರ್ , ಕಲ್ಲಪ್ಪ ಎಂದು ಗುರುತಿಸಲಾಗಿದೆ.

ಇವರು ತೆಲಂಗಾಣ ಹಾಗೂ ಬೀದರನಿಂ ಅಪಾರ ಪ್ರಮಾಣದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಮೊಹ್ಮದ್ ಹಾಫಿಜ್, ಸಂದೀಪ್ ಎಂಬುವವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಎರಡು ಕಾರು, 44 ಕೆ.ಜಿ. ಗಾಂಜಾ, ಏಳು ಮೊಬೈಲ್ ಸೇರಿದಂತೆ ₹23 ಲಕ್ಷ ಮೌಲ್ಯದ ವಸ್ತುಗಳನ್ನು  ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.