ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡ್ ನಂಬರ್ 37ರಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ದೇವಾಡಿಗ ಅವರ ಪರವಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮನೆ ಮನೆ ತೆರಳಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಯೋಗೀಶ್ ಭಟ್, ಸುದರ್ಶನ್ ಮೂಡಬಿದ್ರೆ, ಅಭ್ಯರ್ಥಿ ಕಿರಣ್ ದೇವಾಡಿಗ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












