ಮಂಗಳೂರು: ಉಗ್ರರ ದಾಳಿ ಶಂಕೆಯಿಂದ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಕೂಡ ಶೋಧ ನಡೆಸಲಾಗುತ್ತಿದೆ.
ಮಂಗಳೂರು ನಗರದ ವಿವಿಧ ಆಸ್ಪತ್ರೆ, ಮಾಲ್, ಐಟಿ ಕಂಪೆನಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕಟ್ಟಡಗಳಲ್ಲಿ ಭದ್ರತೆಯನ್ನು ಪರಿಶೀಲಿಸಲು ದಿಢೀರ್ ಶೋಧ ಕಾರ್ಯ ನಡೆಯುತ್ತಿದ್ದು, ಮಂಗಳೂರು ನಗರ ಪೊಲೀಸರಿಂದ ಶೋಧ ಮುಂದುವರಿದಿದೆ.
ಮುಡಿಪು ಇನ್ಫೋಸಿಸ್, ಸೂರ್ಯ ಇನ್ಫೋಟೆಕ್ ನಲ್ಲಿ ತಪಾಸಣೆ, ಕ್ಷೇಮ ಆಸ್ಪತ್ರೆ ಸೇರಿದಂತೆ ಪ್ರಮುಖ ಕೇಂದ್ರಗಳಲ್ಲಿ ತಪಾಸಣೆ ಶ್ವಾನದಳ, ಬಾಂಬ್ ಸ್ಕ್ವಾಡ್ ಬಳಸಿಕೊಂಡು ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಕರಾವಳಿ ಪ್ರದೇಶವಾಗಿರುವ ಕಾರಣ ಮಂಗಳೂರಲ್ಲೂ ನಡೆಯುತ್ತಿದೆ.