ಮಂಗಳೂರು ವಿವಿ ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ


ಮಂಗಳೂರು:  2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು /ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ ಮೂಡಬಿದಿರೆ, ಇಲ್ಲಿಯ ಪದವಿ ಕಾರ್ಯಕ್ರಮದ ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಎಕೊನಾಮಿಕ್ಸ್, ರಾಜ್ಯಶಾಸ್ತ್ರ, ಜಿಯೋಗ್ರಾಫಿ, ಕೆಮಿಸ್ಟ್ರಿ, ಗಣಿತ, ಮೈಕ್ರೊಬಯೋಲಜಿ,  ಕಂಪ್ಯೂಟರ್ ಸೈನ್ಸ್/ಬಿ.ಸಿ.ಎ,  ಬಾಟನಿ, ಪ್ರಾಣಿಶಾಸ್ತ್ರ,  ಕಾಮರ್ಸ್  ಆ್ಯಂಡ್ ಮ್ಯಾನೇಜ್‍ಮೆಂಟ್, ದೈಹಿಕ ಶಿಕ್ಷಣ, ಪತ್ರಿಕೋದ್ಯಮ, ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್‍ಮೆಂಟ್ ವಿಷಯಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ  ಅರ್ಜಿ ಆಹ್ವಾನಿಸಲಾಗಿದೆ.


         ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ಲಿಂಕ್ ಮೂಲಕ  ಜೂನ್ 29 ರೊಳಗೆ ಸಲ್ಲಿಸಬೇಕು.


ಸಲ್ಲಿಸಬೇಕಾದ ದಾಖಲೆಗಳು:


ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಸ್ನಾತಕ ಮತ್ತು  ಸ್ನಾತ್ತಕೋತ್ತರ ಅಂಕಪಟ್ಟಿಗಳು, ಪದವಿ ಪ್ರಮಾಣ ಪತ್ರಗಳು, ಯು.ಜಿ.ಸಿ./ಎನ್.ಇ.ಟಿ./ಎಸ್.ಎಲ್.ಇ.ಟಿ ಉತ್ತೀರ್ಣತೆ/ ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪ್ರಮಾಣಪತ್ರ, ಸಂಶೋಧನಾ ಪತ್ರಿಕೆಗಳು  


ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದನುಸಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು.  ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಯಾವುದೇ ಘಟಕ ಕಾಲೇಜುಗಳಲ್ಲಿ  ಸೇವೆ ಸಲ್ಲಿಸಲು ಸಿದ್ಧರಿರಬೇಕು.  ಈ ಕುರಿತು ವಿಧ್ವವಿದ್ಯಾನಿಲಯದ ತೀರ್ಮಾನವೇ ಅಂತಿಮವಾಗಿರುತ್ತದೆ. ಅಗತ್ಯತೆ ಇದ್ದಲ್ಲಿ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ.


ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.