ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿಯಾಗಿದ್ದು, ಅವರು ವೈಯಕ್ತಿಕ ಕೆಲಸದ ಹಿನ್ನೆಲೆ ದೆಹಲಿಗೆ ತೆರಳಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಆಗಮಿಸಿದ್ದ. ಅನಂತರ ಆ ವ್ಯಕ್ತಿಯನ್ನು ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ವ್ಯಕ್ತಿಯನ್ನು ಜಿಲ್ಲಾಡಳಿತ ಪತ್ತೆ ಮಾಡಿತ್ತು.
ಬಳಿಕ ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ ಯುವಕನಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಮಾ.23ರಿಂದಲೇ ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿದ್ದರು. ಈತನ ಜೊತೆ ತೆರಳಿದ್ದ ತುಂಬೆ ಗ್ರಾಮದ ವ್ಯಕ್ತಿಗೆ ಎ. 4ರಂದೇ ಕೊರೋನ ಪಾಸಿಟಿವ್ ಆಗಿತ್ತು.
ನಿಝಾಮುದ್ದೀನ್ ಏರಿಯಾದ ಟವರ್ ಲೊಕೇಶನ್ ಆಧಾರದಲ್ಲಿ ಈ ವ್ಯಕ್ತಿ ಸೇರಿ 26 ಜನ ಕ್ವಾರಂಟೈನ್ನಲ್ಲಿದ್ದಾರೆ. ಇದರಲ್ಲಿ ತಬ್ಲೀಘಿ ಮಸೀದಿ ತೆರಳಿದ ಮತ್ತು ಆ ಪ್ರದೇಶದಲ್ಲಿ ಸುತ್ತಾಡಿದ 26 ಮಂದಿ ಸೇರಿದ್ದಾರೆ.