ಮಂಗಳೂರು: ಉಳ್ಳಾಲ ಭಾಗದದಲ್ಲಿ ಕಡಲ್ಕೊರೆತಕ್ಕೆ ಒಳಗಾದ ವಿವಿಧ ಭಾಗಗಳಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಭೇಟಿ ನೀಡಿದರು.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿ, ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.
ಈಗಾಗಲೇ ಉಲ್ಲಾಳ ಸುತ್ತಮುತ್ತಲ ಪ್ರದೇಶಗಳಾದ ಕೈಕೋ, ಕಿಲ್ಲೆರೀಯಾ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಹಲವು ಮನೆಗಳು ಅಪಾಯದಲ್ಲಿವೆ.