ಮಂಗಳೂರು: ಕಾರುಗಳೆರಡರ ಮಧ್ಯೆ ಢಿಕ್ಕಿ, ಎಂಟು ಮಂದಿಗೆ ಗಾಯ

ಮಂಗಳೂರು: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬದಲ್ಲಿ ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ‌ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ.
ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮತ್ತೊಂದು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.
ಅಪಘಾತ ಸ್ಥಳಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.