ಮಂಗಳೂರು: ವಿದ್ಯುತ್ ಸ್ಪರ್ಶಿಸಿ ಪವರ್ ಮೆನ್ ದುರ್ಮರಣ 

ಮಂಗಳೂರು: ವಿದ್ಯುತ್ ದುರಸ್ಥಿ ಮಾಡಿದ ಬಳಿಕ ಪೂರೈಕೆ ಮಾಡುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಪವರ್ ‌ಮೆನ್ ಸಾವನ್ನಪ್ಪಿರುವ ಘಟನೆ  ದ.ಕ.‌ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ಬುಧವಾರ ಸಂಭವಿಸಿದೆ. ಮೂಲತಃ‌ ದಾವಣಗೆರೆ ನಿವಾಸಿ ಮಿಟ್ಯಾ ನಾಯಕ್(35), ಮೃತಪಟ್ಟ ದುರ್ದೈವಿ.
ವಿದ್ಯುತ್ ಪರಿವರ್ತಕದಲ್ಲಿ ಚಾಲನೆ ಕೊಡುತ್ತಿದ್ದ  ವೇಳೆ ವಿದ್ಯುತ್ ಶಾಕ್ ಹೊಡೆದಿದೆ.
ಇವರು ಉಪ್ಪಿನಂಗಡಿ ಮೆಸ್ಕಾಂ ಶಾಖೆಯಲ್ಲಿ ಪವರ್ ಮೆನ್ ಆಗಿದ್ದರು. ಇಂದು‌ ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಲಾಗಿತ್ತು. ದುರಸ್ಥಿಯ ಬಳಿಕ ಲೈನ್ ಚಾರ್ಜ್ ಮಾಡಲು ತೆರಳಿದ್ದಾಗ ಘಟನೆ ಸಂಭವಿಸಿದೆ.