ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಜುಲೈ 24ರಂದು ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.
ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನಸಾಗಾಟ ಮಾಡಲಾಗಿದ್ದು, ಚಿನ್ನ ಮತ್ತು ಪ್ರಯಾಣಿಕನನ್ನು ಮಂಗಳೂರು ಕಸ್ಟಂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
34.18 ಲಕ್ಷ ರೂ. ಮೌಲ್ಯದ 963 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಪೇಸ್ಟ್ ರೂಪದಲ್ಲಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.