ಮಂಗಳೂರು‌ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ..! 

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಹೊರಜಾರಿದ್ದು, ಭಾರೀ ದುರಂತವೊಂದು ತಪ್ಪಿದಂತಾಗಿದೆ.
ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ – 380 ವಿಮಾನ ಪೈಲಟ್ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ.
ದುಬೈನಿಂದ 181 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ವಿಮಾನ ಸಂಜೆ 5.20ಕ್ಕೆ ಮಂಗಳೂರು ಬಜಪೆಯ ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ. ಪೈಲೆಟ್ ಸಮಯಪ್ರಜ್ಞೆಯಿಂದ ಯಾವುದೇ ತೊಂದರೆ ಉಂಟಾಗಿಲ್ಲ.