ದಿವ್ಯಾಂಗಚೇತನರ ಬೆಳವಣಿಗೆಗೆ ಇನ್ನಷ್ಟು ಕಾರ್ಯ ನಡೆಯಬೇಕು: ಸಿಂಧು ಬಿ. ರೂಪೇಶ್

ಮಂಗಳೂರು: ವಿಶ್ವ ವಿಕಲಚೇತನರ ದಿನಾಚರಣೆಯನ್ನು ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಶ್ರಯದದಲ್ಲಿ ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಉದ್ಘಾಟಿಸಿದರು. ಅನಂತರ ಮಾತನಾಡಿದ ಅವರು, ದಿವ್ಯಾಂಗ ಚೇತನರ ಬೆಳವಣಿಗೆಗಾಗಿ ಇನ್ನಷ್ಟೂ ಕಾರ್ಯಗಳು ನಡೆಯಬೇಕಿದೆ. ಅವರನ್ನು ಅರ್ಥ ಮಾಡಿಕೊಳ್ಳುವುದು, ಬೆಳವಣಿಗೆಗೆ ಪ್ರೋತ್ಸಾಹ ನೀಡುವುದು, ಹಾಗೂ ಜಾಗೃತಿ ಕಾರ್ಯದ ಮೂಲಕ ಹೆಚ್ಚಿನ ಅರಿವು ಹಾಗೂ ಅವಕಾಶವನ್ನು ನೀಡಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ದಿವ್ಯಾಂಗರನ್ನು ಹಾಗೂ ವಿಕಲಚೇತನರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಮೊದಲು ಮಂಗಳೂರು ವಿವಿ ಕಾಲೇಜಿನಿಂದ ಪುರ ಭವನದ ವರೆಗೆ ವಿಕಲ ಚೇತನರ ಹುಲಿವೇಷ ಸ್ಕೇಟಿಂಗ್ ಸಹಿತ ಮೆರವಣಿಗೆ ನಡೆಯಿತು.
ಶಾಸಕ ಡಿ.ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ , ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ನಿರಂಜನ್ ಭಟ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್‌ಸಾರ್, ಕಾರ್ಪೊರೇಟರ್ ಜಗದೀಶ್ ಶೆಟ್ಟಿ, ದಿನೇಶ್ ಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.