ಮಂಗಳೂರು: ವೃಕ್ಷೋತ್ಸವ-2019, ಅರಣ್ಯ ಸಂರಕ್ಷಣೆಗೆ ಸರಕಾರದಿಂದ ವಿವಿಧ ಯೋಜನೆ: ಕೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಮಂಗಳೂರು ವಿಭಾಗದ ಅರಣ್ಯ ಇಲಾಖೆ ವತಿಯಿಂದ ವೃಕ್ಷೋತ್ಸವ -2019 ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು.
ಅನಂತರ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸಹಕಾರ ನೀಡುತ್ತದೆ. ಅರಣ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಜಿಲ್ಲಾಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಸಿರಿಗಾಗಿ ಹಸಿರು, ನೀರಿಗಾಗಿ ಅರಣ್ಯ ಕ್ವಿಝ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗುರುತಿಸಿಕೊಂಡವರನ್ನು ಗೌರವಿಸಲಾಯಿತು.
ಈ ವೇಳೆ ಶಾಸಕ ಡಿ.ವೇದವ್ಯಾಸ್ ಕಾಮತ್, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನೀತ್ ಪಾಠಕ್, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್.ನೆಟಾಲ್ಕರ್, ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ.ಜಿ.ಗಂಗಾಧರ್ ಮತ್ತಿತರು ಉಪಸ್ಥಿತರಿದ್ದರು.